Breaking News

ಬೆಳಗಾವಿ | ಎರಡು ಗುಂಪುಗಳ ಮಧ್ಯೆ ಗಲಾಟೆ: ಇಬ್ಬರಿಗೆ ಗಾಯ

ಬೆಳಗಾವಿ: ತಾಲ್ಲೂಕಿನ ಧಾಮಣೆ ಎಸ್‌. ಗ್ರಾಮದಲ್ಲಿ ಶುಕ್ರವಾರ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಜೀವಪ್ಪ ಗಾವಡೆ, ಅನಿಲ ಗಾವಡೆ ಗಾಯಾಳುಗಳು. ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ‘ಜೀವಪ್ಪ ತಮ್ಮ ಕೃಷಿಭೂಮಿಯಲ್ಲಿ ಕೊಳವೆಬಾವಿ ಕೊರೆಯಿಸಲು ಮೇ 5ರಂದು ವಾಹನ ತರಿಸಿದ್ದರು. ಆಗ ಇದೇಮಾರ್ಗದ ತಮ್ಮ ಜಮೀನಿನಲ್ಲಿ ವಾಹನ ಹಾಯ್ದು ಹೋಗಿದ್ದಕ್ಕೆ ಸುರೇಶ ಪಾಟೀಲ, ಗೋವಿಂದ ಪಾಟೀಲ, ವಿನಾಯಕ ಪಾಟೀಲ, ಶಿವಾಜಿ ಪಾಟೀಲ, ಅಪ್ಪಾಜಿ ಪಾಟೀಲ ಹಾಗೂ ಮಹೇಶ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಶುಕ್ರವಾರ ಮತ್ತೆ ಗಲಾಟೆಯಾಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *