ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅಟ್ರಾಸಿಟಿ ಹಾಗೂ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸದಿರಲು ಮತ್ತು ಪ್ರಕರಣಕ್ಕೆ ‘ಬಿ-ರಿಪೋರ್ಟ್’ ಸಲ್ಲಿಸಲು ಪಿಐ ವೀರಣ್ಣ ಅವರು 2 ಲಕ್ಷ ರೂ.ಲಂಚದ ಬೇಡಿಕೆ ಇಟ್ಟಿದ್ದರು. ಗ್ರಾಪಂ ಮಾಜಿ ಸದಸ್ಯ ಆನಂದ್ ಎಂಬುವವರು ನೀಡಿದ ದೂರಿನ ಮೇರೆಗೆ ಶುಕ್ರವಾರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮುಂಗಡವಾಗಿ 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ವೀರಣ್ಣ ಅವರು ಸಿಕ್ಕಿಬಿದ್ದಿದ್ದರು. ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಶನಿವಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಇಲಾಖೆ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

