Breaking News

ಮೂಡುಬಿದಿರೆ: ಬೆಳುವಾಯಿ ಬಳಿ ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

ಮೂಡುಬಿದಿರೆ: ಇಲ್ಲಿಗೆ ಸಮೀಪದ ಬೆಳುವಾಯಿ ಬಳಿಯ ಬನ್ನಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ಶನಿವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಸಾಗುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಮಧ್ಯಾಹ್ನ ನಂತರ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಬದಲಾಯಿಸಲಾಗಿತ್ತು. ಪಲ್ಟಿ ಹೊಡೆದ ಬಸ್ ಹತ್ತಿರದಲ್ಲಿದ್ದ ದ್ವಿಚಕ್ರ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಿತೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ. ಇನ್ನು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಮತ್ತು ಸರಿಯಾದ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಈ ಪ್ರದೇಶದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *