Breaking News

ಪ್ರಕರಣ ಇತ್ಯರ್ಥಕ್ಕೆ ಲಂಚ: ಗುರಮಠಕಲ್ ಪಿಎಸ್ ಐ ಲೋಕಾಯುಕ್ತ ಅಧಿಕಾರಿಗಳ ಬಲೆಗೆ

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನ ವಿಚಾರಣೆ ನಡೆಸಿದ ರೈಲ್ವೆ ಪೊಲೀಸರಿಗೆ ಶಾಕ್ ಆಗಿದ್ದು, ವಿಚಾರಣೆ ವೇಳೆ ಯುವಕ ಕುಖ್ಯಾತ ದರೋಡೆಕೋರನಾಗಿದ್ದು, ಇದೀಗ ಆತನನ್ನು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು ₹13.06 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಈತನ ಬ್ಯಾಗ್ ತಪಾಸಣೆ ನಡೆಸಿದಾಗ, ಯಾವುದೇ ದಾಖಲೆಗಳಿಲ್ಲದ 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್‌ಲೆಟ್ ಹಾಗೂ ಸ್ಟಡ್‌ಗಳು ಸೇರಿವೆ. ವಿಚಾರಣೆ ವೇಳೆ ಈತ ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಎಂಬಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಪಾವರಟ್ಟಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಈಗಾಗಲೇ ಪ್ರಕರಣ (Crime No. 516/2026) ದಾಖಲಾಗಿದ್ದು, ಎರ್ನಾಕುಳಂ ಮತ್ತು ಕಾಸರಗೋಡು ವ್ಯಾಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯ ವಿರುದ್ಧ ಹಲವು ಬಾಕಿ ವಾರಂಟ್‌ಗಳಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಕೇರಳ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *