ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡು ವಿದೇಶದಲ್ಲಿ ನೆಲೆಸಿದ್ದ ಆರೋಪಿ, ಕರಿಯಂಗಳ ನಿವಾಸಿ ದುನಿಯಾ ಶರೀಫ್ ಯಾನೆ ಮಹಮ್ಮದ್ ಶರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಮೇ 5ರಂದು ವಿದೇಶದಿಂದ ಹಿಂದಿರುಗುತ್ತಿದ್ದ ವೇಳೆ ಆತನನ್ನು ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿರುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

