Breaking News

ಹಾವೇರಿ, ಕೋಲಾರದಲ್ಲಿ ಪ್ರತ್ಯೇಕ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ವ್ಯಕ್ತಿಗಳ ಬರ್ಬರ ಹತ್ಯೆ!

ಹಾವೇರಿ ಮತ್ತು ಕೋಲಾರದಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಮನೆಯಲ್ಲಿ ಮಲಗಿದ್ದವನು ಕೊಲೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ಬಸವನಬೀದಿಯಲ್ಲಿ ಒಂದು ಘಟನೆ ನಡೆದಿದ್ದು ಮಹಾಲಿಂಗ ಜಯ ಬಸವರಾಜ್ ಮಳವಳ್ಳಿ (41) ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಜಯ ಬಸವರಾಜ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಘಟನೆ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಇನ್ನೊಂದು ಕಡೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಸತ್ಯ ಮೈದಾನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬೀಕರವಾಗಿ ಕೊಲೆ ಮಾಡಲಾಗಿದೆ ಜಂಗಾಲಹಳ್ಳಿ ಪುರುಷೋತ್ತಮ (26) ಎನ್ನುವ ವ್ಯಕ್ತಿಯನ್ನು ಬರ್ಬಾರವಾಗಿ ಕೊಲೆ ಮಾಡಲಾಗಿದ್ದು ಮಚ್ಚಿನಿಂದ ಹಲ್ಲೆ ಮಾಡಿ ಬಳಿಕ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಪುರುಷೋತ್ತಮ್ನನ್ನು ಕೊಲೆ ಮಾಡಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಘಟನೆ ಕುರಿತು ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *