Breaking News

ಪೊಲೀಸರ ಮೇಲೆ ಹಲ್ಲೆ: ಬಂಧನ

ಪಾವಗಡ: ಚಿಕ್ಕಬಳ್ಳಾಪುರ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಪಟ್ಟಣದ ಆದರ್ಶ ನಗರದ ಯಶ್ವಂತ್ (21)ನನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಾಗಾರ್ಜುನ ಕಾಲೇಜು ಬಳಿ ದ್ವಿಚಕ್ರ ವಾಹನಕ್ಕೆ ಹೆಚ್ಚು ಶಬ್ಧ ಬರುವ ಸೈಲೆನ್ಸರ್‌ ಅನ್ನು ಅಳವಡಿಸಕೊಂಡು ಶಬ್ಧ ಮಾಡುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು, ಪಿಸಿ ಗಂಗರಾಜು ಅವರ ಮೇಲೆ 13ಕ್ಕೂ ಹೆಚ್ಚು ಮಂದಿ ಯುವಕರ ತಂಡ ಹಲ್ಲೆ ನಡೆಸಿ ಪರಾರಿಯಾಗಿತ್ತು. ಆರೋಪಿ ಪಟ್ಟಣದಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ, ಚಿಕ್ಕಬಳ್ಳಾಪುರ ಪೊಲೀಸರ ವಶಕ್ಕೆ ನೀಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *