Breaking News

ಕುಣಿಗಲ್ -ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ – ಕಾರಿನಲ್ಲಿದ್ದ ನಾಲ್ವರು ಸಾವು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಶನಿವಾರ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗಾಯತ್ರಿ, (63) ಪತಿ ಕುಮಾರ ನರಸಿಂಹ ಸ್ವಾಮಿ(65) ಮೃತರು. ಮತ್ತಿಬ್ಬರ ವಿಳಾಸ ಇನ್ನೂ ಪತ್ತೆಯಾಗಿಲ್ಲ. ತುಮಕೂರು ಕಡೆಯಿಂದ ಹೊರಟಿದ್ದ ಕಾರಿಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದು ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಪೋಲಿಸರು ಶವಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟರು. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *