Breaking News

ಕನಕಪುರ: ಬೀಡಿ ಕೊಡದ ವ್ಯಕ್ತಿ ಮೇಲೆ ಕುಡುಗೋಲಿನಿಂದ ಹಲ್ಲೆ

ಕನಕಪುರ: ಹಾರೋಹಳ್ಳಿ ತಾಲ್ಲೂಕಿನ ಮರಳವಾಡಿ ಹೋಬಳಿ ದುನ್ನಸಂದ್ರ ಗ್ರಾಮದಲ್ಲಿ ಗುರುವಾರ ಸೇದಲು ಬೀಡಿ ಕೊಡದ ವ್ಯಕ್ತಿ ಮೇಲೆ ಮತ್ತೊಬ್ಬ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಗುರುವಾರ ಮಧ್ಯಾಹ್ನ ಗ್ರಾಮದ ದೇವಸ್ಥಾನದ ಬಳಿ ಕುಳಿತಿದ್ದ ಚಂದ್ರಾಚಾರ್ ಅವರನ್ನು ಗ್ರಾಮದ ಗವೀಶ ಬೀಡಿ ಕೇಳಿದ್ದಾನೆ. ಬೀಡಿ ಇಲ್ಲ ಎಂದು ಹೇಳಿದ ಚಂದ್ರಚಾರ್ ಅವರನ್ನು ಮದ್ಯ ಕುಡಿಯಲು ಮನೆಯ ಹಿಂಭಾಗಕ್ಕೆ ಕರೆದೊಯ್ದ ಗವೀಶ, ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಚಂದ್ರಚಾರ್ ರಕ್ಷಣೆಗಾಗಿ ಕೂಗಿಕೊಂಡಾಗ ಗವೀಶ ಸ್ಥಳದಿಂದ ಓಡಿ ಹೋಗಿದ್ದಾನೆ. ಬೀಡಿ ಕೊಡದ ಕಾರಣ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಲು ಯತ್ನಿಸಿದ ಗವೀಶ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದ್ರಚಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *