Breaking News

ಭದ್ರಾವತಿ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಭದ್ರಾವತಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಟ್ಟಣದ ನಿವಾಸಿಯಾಗಿರುವ 22 ವರ್ಷದ ಯುವಕ 2022ರಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಆಧಾರದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾಗಿದ್ದರಿಂದ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 2.5 ಲಕ್ಷ ದಂಡ ವಿಧಿಸಿದೆ. ₹ 2.25 ಲಕ್ಷ ಪರಿಹಾರವನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶಿಸಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *