Breaking News

ನಾಲ್ವರ ವಿರುದ್ಧ ಆರೋಪ: ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಹಾಸನ: ಯುವತಿಯ ವಿಷಯವಾಗಿ ನಾಲ್ವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ಈ ದುರಂತ ಸಂಭವಿಸಿದೆ. ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಮಾಕವಳ್ಳಿ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕನ ಆಡಿಯೋ ಆಧರಿಸಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಿಸಿಕೊಂಡಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ನಾಲ್ವರು ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *