Breaking News

ಯಾದಗಿರಿ ಪೊಲೀಸ್‌ ಅಧಿಕಾರಿ ಲೋಕಾಯುಕ್ತ ಬಲೆಗೆ; 1 ಲಕ್ಷ ರೂ. ಸ್ವೀಕರಿಸುತಿರುವಾಗಲೇ ದಾಳಿ

ಯಾದಗಿರಿ: ಇತ್ತೀಚೆಗೆ ಲೋಕಾಯುಕ್ತವು ಪೊಲೀಸ್‌ ಮೇಲೆ ಜಾಸ್ತಿ ಕಣ್ಣಿಡುತ್ತಿದೆ. ಲಂಚ ಪಡೆಯುತ್ತಿರುವ ಸಂದರ್ಭದಲ್ಲೇ ಲೋಕಾಯಕ್ತ ಕೈಯಲ್ಲಿ ಸಿಕ್ಕಿಬೀಳುವ ಪೊಲೀಸ್‌ ಸಿಬ್ಬಂದಿ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದೀಗ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ವೀರಣ್ಣ ದೊಡ್ಡಮನಿ ಲೋಕಾಯುಕ್ತರ ಕೈಯಿಗೆ ಸಿಕ್ಕಿಬಿದ್ದಿದ್ದಾರೆ. ಇವರು ಸುಮಾರು 1 ಲಕ್ಷ ರೂಪಾಯಿ ಲಂಚ ಸ್ವೀಕಾರ ಮಾಡುತ್ತಿರುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ವೀರಣ್ಣ ದೊಡ್ಡಮನಿ ಅವರು ಕ್ರಿಮಿನಲ್‌ ಕೇಸ್‌ವೊಂದರ ತನಿಖೆ ಕೈಗೆತ್ತಿಕೊಂಡಿದ್ದರು. ಆದರೆ ಆರೋಪಿಗಳನ್ನ ಬಂಧಿಸದೆ ಇರಲು ಮತ್ತು ಕೇಸ್‌ ಕೈಬಿಡಲು 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬಗ್ಗೆ ಆನಂದ್‌ ಎನ್ನುವವರು ದೂರು ನೀಡಿದ್ದರು. ಆನಂದ್‌ ನೀಡಿದ್ದ ಮಾಹಿತಿ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಲಂಚದ ಹಣದೊಂದಿಗೆ ಇನ್ಸ್‌ಪೆಕ್ಟರ್ ವೀರಣ್ಣ ಅವರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *