Breaking News

ಜಿಂಕೆ ಮಾಂಸ ಮಾರಾಟ: ಬಂಧನ

ಗುಂಡ್ಲುಪೇಟೆ: ತಾಲ್ಲೂಕಿನ ಕೂತನೂರು ಗ್ರಾಮದಲ್ಲಿ ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಬಫರ್ ವಲಯದ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ತಾಲ್ಲೂಕಿನ ಕೂತನೂರು ಗ್ರಾಮದ ಲಕ್ಷ್ಮಣ್(30) ಬಂಧಿತ. ಮಾಹಿತಿ ಅರಿತ ಪೊಲೀಸರು ಮನೆಯ ಪಕ್ಕದ ಹಿತ್ತಲಿನಲ್ಲಿ ಜಿಂಕೆ ಮಾಂಸವನ್ನು ಕತ್ತರಿಸಿ ಮಾರಾಟ ಮಾಡುತ್ತಿದ್ದಾಗ ಅರಣ್ಯಾಧಿಕಾರಿ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಮಾಂಸದ ಜೊತೆಗೆ ಜಿಂಕೆಯ ತಲೆ, ಕಾಲುಗಳು ಸಿಕ್ಕಿವೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *