Breaking News

ಬಸ್ ಹರಿದು 6 ಕುರಿಗಳು ಸಾವು

ಕೊಳ್ಳೇಗಾಲ: ತಾಲ್ಲೂಕಿನ ಟಗರುಪುರ ಮೋಳೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹರಿದು ರಂಗಶೆಟ್ಟಿ ಅವರಿಗೆ ಸೇರಿದ 6 ಕುರಿಗಳು ಸೋಮವಾರ ಸ್ಥಳದಲ್ಲೇ ಮೃತಪಟ್ಟಿವೆ. ರಂಗಶೆಟ್ಟಿ ತಮ್ಮ 19 ಕುರಿಗಳನ್ನು ಕಾಡಿಗೆ ಮೇಯಿಸುವ ಸಲುವಾಗಿ ಹೊರಟ್ಟಿದ್ದ ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಕುರಿಗಳು ದಾಟುವಾಗ ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವೇಗವಾಗಿ ಬಂದು ಕುರಿಗಳ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟವು. ಸ್ಥಳೀಯರು 112ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಲಾಟೆ ಆಗುವುದನ್ನು ತಪ್ಪಿಸಿದ್ದಾರೆ. ಅಗರ ಮಾಂಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ಕರಿಬಸಪ್ಪ ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *