ಹನಗೋಡು: ಹೋಬಳಿಯ ತುಂಡು ಹೆಬ್ಬಳ್ಳ ಗ್ರಾಮದಲ್ಲಿ ಮನೆ ಹಿಂಭಾಗದ ಹಿತ್ತಲಿನಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಈ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಕಡನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ತುಂಡು ಹೆಬ್ಬಳ್ಳ ನಿವಾಸಿ ಚಿನ್ನಂಕ ಭೋವಿ ಪುತ್ರ ರಾಜು ಭೋವಿ ಮನೆ ಹಿತ್ತಲಿನಲ್ಲಿ ಗಾಂಜಾ ಗಿಡ ಪತ್ತೆಯಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ರಾಜಭೋವಿ ತನ್ನ ಮನೆ ಹಿತ್ತಲಿನಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಡಿವೈಎಸ್‌ಪಿ ಮೋಹನ್ ಕುಮಾರ್, ಇನ್‌ಸ್ಪೆಕ್ಟರ್ ಧರ್ಮರಾಜು ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಮನೆ ಹಿತ್ತಲಿನಲ್ಲಿ ಬೆಳೆದಿದ್ದ ಗಾಂಜಾ ಗಿಡ ಪತ್ತೆಯಾಗಿದ್ದು, 1.5 ಕೆಜಿ ಗಾಂಜಾ ಗಿಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ದಾಳಿಯ ಸುಳಿವರಿತ ಆರೋಪಿ ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ಇನ್‌ಸ್ಪೆಕ್ಟರ್ ಧರ್ಮರಾಜ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಎಸ್.ಎನ್.ಯೋಗೀಶ್, ಜಯಂತಿ, ಸಿಬ್ಬಂದಿ ರವಿಸ್ವಾಮಿ, ಪುಟ್ಟಸ್ವಾಮಿ, ಚಾಲಕ ರಾಮಚಂದ್ರ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

