Breaking News

ಚಿಕ್ಕಬಳ್ಳಾಪುರ: ಬಾಲಕರಿಂದ ಮೊಬೈಲ್ ಕಳ್ಳತನ

ಚಿಕ್ಕಬಳ್ಳಾಪುರ: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಬಾಲಕನನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಕೇಶವ, ಚಿಕ್ಕಬಳ್ಳಾಪುರದಿಂದ ದೇವನಹಳ್ಳಿಗೆ ತೆರಳಲು ಸರ್ಕಾರಿ ಬಸ್ ಹತ್ತುತ್ತಿದ್ದರು. ಈ ವೇಳೆ ಇಬ್ಬರು ಬಾಲಕರು ಮೊಬೈಲ್ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕೇಶವ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಿಲ್ದಾಣದಲ್ಲಿರುವ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾಗ ಮತ್ತಿಬ್ಬರು ಯುವಕರು ತಮ್ಮ ಮೊಬೈಲ್ ಸಹ ಕಳ್ಳತನವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಳ್ಳತನ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಾರಿಗೆ ಅಧಿಕಾರಿಗಳು ತಕ್ಷಣ ಎಚ್ಚೆತ್ತು ಒಬ್ಬ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಬಾಲಕ ಪರಾರಿ ಆಗಿದ್ದಾನೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *