Breaking News

ಬೆಳ್ತಂಗಡಿ: ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಇಬ್ಬರ ಬಂಧನ

ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಕ್ಯಾಂಟಿನ್ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಸಂತ್ರಸ್ತೆಯನ್ನು ರಕ್ಷಿಸಿದ್ದು, ಮೂವರನ್ನು ವಶಕ್ಕೆ ಪಡೆದು ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆಯಲ್ಲಿರುವ ಸುಂದ‌ರ್ ಶೆಟ್ಟಿ ಮಾಲೀಕತ್ವದ ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಕ್ಯಾಂಟಿನ್ ಮಾಲೀಕ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದ‌ರ್ ಶೆಟ್ಟಿ (55) ಮತ್ತು ಸ್ನೇಹಿತ ನಾವೂರು ಗ್ರಾಮದ ಉಸ್ಮಾನ್ (38) ಎಂಬುವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವೇಶ್ಯಾವಟಿಕೆ ಅಡ್ಡೆಗೆ ಬಂದಿದ್ದ ಕಲ್ಲೇರಿ ನಿವಾಸಿ ಹೈದರ್ (45) ಎಂಬಾತನನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ವೇಳೆ ರಕ್ಷಣೆ ಮಾಡಲಾದ 29 ವರ್ಷದ ಮಹಿಳೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *