ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಆಕೆಯ ಖಾಸಗಿ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಸ್ನೇಹದಲ್ಲಿದ್ದ ಯುವಕ, ಪ್ರೇಮದ ನಾಟಕವಾಡಿ ಯುವತಿಯಿಂದ ಖಾಸಗಿ ಫೋಟೋಗಳನ್ನು ಪಡೆದಿದ್ದನು. ನಂತರ ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಆ ಫೋಟೋಗಳನ್ನು ವೈರಲ್ ಮಾಡಿದ್ದಾನೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನನ್ವಯ ಶಿವಮೊಗ್ಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

