Breaking News

ಮೂಲ್ಕಿ; 35 ಲಕ್ಷ ರೂ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿ ಬಂಧನ

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾ ಸಹಿತ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಮೇ 12) ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. 35 ಲಕ್ಷ ರೂ ಮೌಲ್ಯದ ಹೈಡ್ರೋವಿಡ್ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುವನ್ನು ಚೆನ್ನೈ ನಿಂದ ತರಿಸಿ ಕೊಂಡು ಮಾರಾಟ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು. ಬಂಧಿತಳ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡ ದಿಂದ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿತೆಯ ಮೇಲೆ ಕಾವೂರು ಪೊಲೀಸ್ ಠಾಣೆ ಯಲ್ಲಿ NDPS Act ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ಕಸ್ಟಮ್ ನಲ್ಲೂ NDPS Act ಅಡಿ ಪ್ರಕರಣ ದಾಖಲಾಗಿವೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *