Breaking News

12 ಎತ್ತುಗಳ ರಕ್ಷಣೆ; ಆರೋಪಿ ಬಂಧನ

ಶಿವಮೊಗ್ಗ: ಕಸಾಯಿಖಾನೆಗೆ ಕೊಂಡೊಯ್ದು ಕಡಿಯುವ ಉದ್ದೇಶದಿಂದ ಅಕ್ರಮವಾಗಿ ತಂದು ಇಲ್ಲಿನ ಸೂಳೇಬೈಲು ಈದ್ಗಾ ನಗರದ ಬಳಿ ಕಟ್ಟಿದ್ದ 12 ಎತ್ತುಗಳನ್ನು ತುಂಗಾ ನಗರ ಠಾಣೆ ಪೊಲೀಸರು ಮಂಗಳವಾರ ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈದ್ಗಾ ನಗರದ ನಿವಾಸಿ, ಫಿಶ್ ಪ್ಲಾಂಟ್‌ನಲ್ಲಿ ಕೆಲಸ ಮಾಡುವ ಅಬ್ದುಲ್ ಅಜೀಜ್ (35) ಎಂಬಾತನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಇನ್‌ಸ್ಪೆಕ್ಟರ್ ಗುರುರಾಜ್ ಕರ್ಕಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *