Breaking News

ಮಣಿಪಾಲ: ಭಗ್ನ ಪ್ರೇಮಿಯಿಂದ ಯುವತಿಗೆ ಚೂರಿ ಇರಿತ

ಭಗ್ನ ಪ್ರೇಮಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಣಿಪಾಲ ಶಾಂತಿನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅಂಕೋಲ ಮೂಲದ ಯೋಗೀತಾ (23) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಾಂತಿನಗರದ ಐಡಿಯಲ್ ಬಿಲ್ಡಿಂಗ್‌ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದು, ಆಕೆಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದು, ಇದರಿಂದ ಕುಪಿತಗೊಂಡ ಆರೋಪಿ ಆಕೆಗೆ ಚೂರಿಯಿಂದ ಇರಿದು ಪರಾರಿ ಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *