Breaking News

10 ಲಕ್ಷ ರೂ. ಮೌಲ್ಯದ 2 ಜಿಂಕೆ ಕೊಂಬು ಜಪ್ತಿ: 3 ಆರೋಪಿಗಳ ಬಂಧನ

ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿಯಿಂದ ಬೆಂಗಳೂರಿಗೆ ಜಿಂಕೆ ಕೊಂಬು ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಮತ್ತು ಚಿಕ್ಕ ಬಾಣಾವಾರ ಪೊಲೀಸರ ಜಂಟಿ ಕಾರ್ಯಾ ಚರಣೆಯಲ್ಲಿ ಬಂಧಿ ಸಲಾಗಿದೆ. ಮುರುಳಿ (29), ಮಂಜುನಾಥ (39) ಹಾಗೂ ಕಾರ್ಯಪ್ಪ (53) ಬಂಧಿತರು. ಆರೋಪಿಗಳಿಂದ ಸುಮಾರು 10 ಲಕ್ಷ ರೂ.ಮೌಲ್ಯದ ಜಿಂಕೆಯ 2 ಕೊಂಬನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಚಿಕ್ಕಬಾಣಾವರ ಕಾಲೇಜುವೊಂದರ ಬಳಿ ಮಾರಾಟ ಮಾಡಲು ಮುಂದಾಗಿದ್ದರು. ಈ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸ್‌ ಇನ್‌ ಸ್ಪೆಕ್ಟರ್‌ ಪಿ. ಸುರೇಶ ಮತ್ತು ಚಿಕ್ಕಬಾಣಾವಾರ ಪೊಲೀರ್‌ಪಿಐ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳನ್ನು ಹತ್ಯೆಗೈದು ಈ ಕೃತ್ಯ ಮಾಡುತ್ತಿದ್ದಾರೆಯೋ ಅಥವಾ ಮೃತ ಪ್ರಾಣಿಗಳ ಕೊಂಬನ್ನು ಮಾರಾಟಕ್ಕೆ ಯತ್ನ ನಡೆಸುತ್ತಿದ್ದರೋ ಎಂಬ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು, ಈ ಕೃತ್ಯದ ಹಿಂದಿರುವವರ ಬಗ್ಗೆ ಪತ್ತೆ ಮುಂದಾಗಿದ್ದಾರೆ. ಕೆಲ ಪ್ರಾಣಿಗಳ ಕೊಂಬು ಹಾಗೂ ಚರ್ಮ ಹೆಚ್ಚಿನ ಬೆಲೆಗೆ ಮಾರಾಟ ಹಾಗೂ ವಿದೇಶಗಳಿಗೂ ಸಾಗಣೆ ಮಾಡುತ್ತಿರುವ ಬಗ್ಗ ಶಂಕೆ ಇದೆ ಎಂದು ಪೊಲೀಸರು ತಿಳಿದ್ದಾರೆ. ಈ ಸಂಬಂಧ ಚಿಕ್ಕಬಾಣಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *