Breaking News

ಬೆಳಗಾವಿ, ಧಾರವಾಡದಲ್ಲಿ ಕಳ್ಳತನವಾಗಿದ್ದ ಎರಡು ಕಾರು ವಶಕ್ಕೆ

ಬೆಳಗಾವಿ: ಹನುಮಾನ ನಗರ ಹಾಗೂ ಧಾರವಾಡ ಉಪನಗರ ವ್ಯಾಪ್ತಿಯಲ್ಲಿ ನಡೆದಿದ್ದ ಕಾರುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ, ಎರಡು ಕಾರುಗಳನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಹನುಮಾನ ನಗರದಲ್ಲಿ ನಮ್ಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನವಾಗಿದೆ’ ಎಂದು ಪ್ರಿಯಾಂಕ ಅಜರೇಕರ ಅವರು, ಮೇ 10ರಂದು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಾಗ, ಮಹಾರಾಷ್ಟ್ರದ ಮುಂಬೈನಲ್ಲಿ ಕಾರು ಪತ್ತೆಯಾಗಿತ್ತು. ಇದರೊಂದಿಗೆ ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಮತ್ತೊಂದು ಕಾರು ಕೂಡ ಸಿಕ್ಕಿದೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *