Breaking News

ಬೆಂಗಳೂರಿನಲ್ಲಿ 2,384 ಕೋಟಿ ರೂ. ನಕಲಿ ಜಿಎಸ್‌ಟಿ ಜಾಲ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ!

ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳು ನಕಲಿ ಕಂಪನಿಗಳನ್ನು ಸೃಷ್ಟಿಸಿ, ಯಾವುದೇ ಸರಕು ಅಥವಾ ಸೇವೆಗಳ ಪೂರೈಕೆ ಮಾಡದೆಯೇ ಬಿಲ್‌ಗಳನ್ನು ಸೃಷ್ಟಿಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿದ್ದರು. ನಕಲಿ ಐಟಿಸಿ ಹಗರಣಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಈ ವರ್ಷ ತನಿಖೆಯನ್ನು ತೀವ್ರಗೊಳಿಸಿದ್ದು, ಈ ಇಬ್ಬರ ಬಂಧನದೊಂದಿಗೆ ಈ ವರ್ಷ ಒಟ್ಟು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *