Breaking News

ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗೋಮಾಂಸ ವಶಕ್ಕೆ

ಯಳಂದೂರು: ಪಟ್ಟಣದ ಬಳೇಪೇಟೆಯ 9ನೇ ವಾರ್ಡಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳ ತಂಡ ದಾಳಿ ನಡೆಸಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಬಳೇಪೇಟೆಯಲ್ಲಿ ಗೋಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಮದ್ದೂರು ಗ್ರಾಮದ ಯೋಗೇಶ್ ಎಂಬುವರು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿ ರಾಘವೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ. ಇಲ್ಲಿಂದ ಮಾಂಸವನ್ನು ವಶಪಡಿಸಿಕೊಂಡು ಇದನ್ನು ಪೌರ ಕಾರ್ಮಿಕರ ನೆರವಿನೊಂದಿಗೆ ಮಣ್ಣಿನಲ್ಲಿ ಹೂತು ಹಾಕಿದ್ದಾರೆ. ಇದನ್ನು ಮಾರಾಟ ಮಾಡುತ್ತಿದ್ದ ನಟರಾಜು ಎಂಬುವರಿಗೆ ಮುಂದೆ ಇದನ್ನು ಮಾರಾಟ ಮಾಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *