ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಶ್ರೀ ಸುಯತೀಂದ್ರ ತೀರ್ಥರ ಕಾಲನಿಯ ಕಾರ್ಮಿಕರ ಶೆಡ್‌ನಲ್ಲಿ ಮಂಗಳವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿದೆ. ಶ್ರೀಮಠದಲ್ಲಿ ಕಟ್ಟಡ ಮತ್ತು ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮಾಹಿತಿ ತಿಳಿದ ಅಗ್ನಿಶಾಮಕ ದಳ, ಮಂತ್ರಾಲಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಘಟನಾ ಸ್ಥಳಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐದು ಶೆಡ್‌ಗಳಲ್ಲಿ ವಾಸಿಸುತ್ತಿದ್ದ 20 ಜನರಿಗೆ ರೇಷನ್, ಅಗತ್ಯ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಮಂತ್ರಾಲಯಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

