Breaking News

ಅಲ್ಲೂರ್ (ಬಿ): ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ

ಚಿತ್ತಾಪುರ: ಹಳೆಯ ವೈಷಮ್ಯಕ್ಕೆ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ. ಸಿದ್ದಪ್ಪ ಮಲ್ಲಪ್ಪ ಹುಳಗೊಳರ್ (25) ಕೊಲೆಯಾದ ಯುವಕ. ಘಟನೆಯ ಸುದ್ದಿ ತಿಳಿಯುತ್ತಿದಂತೆ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ರಾತ್ರಿ ಗ್ರಾಮದ ಕೆರೆಯ ಹತ್ತಿರ ಸಿದ್ದಪ್ಪ ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಕ್ಕೆ ಒಪ್ಪಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *