Breaking News

ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35ಲಕ್ಷ ರೂ‌. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುಹಾನ (21) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಮೇ 12ರಂದು ಮಾರಾಟ ಮಾಡಲೆಂದು ಸುಹಾನ ಹೈಡ್ರೋವೀಡ್ ಗಾಂಜಾವನ್ನು ಸಾಗಿಸುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆಯ ಪೊಲೀಸರು ತಂಡ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಅವಳ ಬಳಿ ಇದ್ದ ಸುಮಾರು 35 ಲಕ್ಷ ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೋವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಮತ್ತು ಇತರ ಸೊತ್ತನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಮಾದಕದ್ರವ್ಯವನ್ನು ಆರೋಪಿತೆ ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದಳು. ಆರೋಪಿತೆಯ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಮಿಷನರ್​ ತಿಳಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *