Breaking News

ಬಾಗಲಕೋಟೆ | ಎಟಿಎಂ ಕಾರ್ಡ್ ಬದಲಿಸಿ ವಂಚನೆ: ಆರೋಪಿ ಬಂಧನ

ಎಟಿಎಂ ಕಾರ್ಡ್ ಬದಲಾಯಿಸಿ ಹಣ ಲಪಟಾಯಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮಖಂಡಿಯ ಸುಜ್ಜಿತ್‌ ಭಜಂತ್ರಿ ಬಂಧಿತ ಆರೋಪಿ. ಆರೋಪಿಯಿಂದ ₹60 ಸಾವಿರ ಜಪ್ತಿ ಮಾಡಲಾಗಿದೆ. ವಿದ್ಯಾಗಿರಿಯ ಎಸ್‌ಬಿಐ ಎಟಿಎಂ ಕೇಂದ್ರದಲ್ಲಿ ಹಣ ತೆಗೆದುಕೊಡುವುದಾಗಿ ವ್ಯಕ್ತಿಯೊಬ್ಬರಿಂದ ಎಟಿಎಂ ಪಡೆದು, ಹಣ ತೆಗೆದುಕೊಟ್ಟ ನಂತರ ಬದಲಿ ಎಟಿಎಂ ಕಾರ್ಡ್ ಅನ್ನು ಅವರಿಗೆ ನೀಡಿದ್ದನು. ನಂತರದಲ್ಲಿ ಎಟಿಎಂ ಕಾರ್ಡ್ ಬಳಸಿ ₹85 ಸಾವಿರ ಹಣ ಡ್ರಾ ಮಾಡಿದ್ದನು. ಪೊಲೀಸರು ನೋಟಿಸ್‌ ನೀಡಿದ್ದರೂ ಹಾಜರಾಗಿರಲಿಲ್ಲ. ಜಮಖಂಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *