Breaking News

ಎಟಿಎಂ ಕಾರ್ಡ್ ಬದಲಿಸಿ 1.20 ಲಕ್ಷ ರೂ. ವಂಚನೆ

ರಾಣೆಬೆನ್ನೂರು: ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವ್ಯಕ್ತಿಯೊಬ್ಬ ಖಾತೆಯಿಂದ 1.20 ಲಕ್ಷ ರೂ. ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ತಾಲೂಕಿನ ಮೈದೂರ ಗ್ರಾಮದ ಪ್ರವಿಣ ಮಲ್ಲಪ್ಪ ಹಟ್ಟಿ (45) ಎಂಬುವರಿಗೆ ಮೋಸ ಮಾಡಿರುವುದು. ಇವರು ಎಟಿಎಂನಲ್ಲಿ ಹಣ ಡ್ರಾ ಮಾಡಿಸಿಕೊಳ್ಳುವ ಸಲುವಾಗಿ ಬಂದಾಗ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಣ ಡ್ರಾ ಮಾಡಿಕೊಡುವುದಾಗಿ ನಂಬಿಸಿ ಕಾರ್ಡ್ ತೆಗೆದುಕೊಂಡಿದ್ದಾನೆ. ನಂತರ ನಿಮ್ಮ ಹಣ ಬರುತ್ತಿಲ್ಲವೆಂದು ಆತನಿಗೆ ಬೇರೆ ಕಾರ್ಡ್ ಕೊಟ್ಟು ಕಳುಹಿಸಿ, ಈತ ಹಣ ಡ್ರಾ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *