Breaking News

ಉಡುಪಿ: ತಲೆಗೆ ಕಲ್ಲಿನಿಂದ ಹೊಡೆದು ಸರ ಅಪಹರಣ

ಉಡುಪಿ: ಮಣಿಪಾಲದ ಶಾಂತಿನಗರದ ಬಳಿ ರೂಮ್‌ನಲ್ಲಿ ವಾಸವಾಗಿದ್ದ ಮಹಿಳೆಯ ತಲೆಗೆ ಕಲ್ಲಿನಿಂದ ಹೊಡೆದು ಸರ ಅಪಹರಿಸಿರುವ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯೋಗಿತಾ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರು ಸ್ನೇಹಿತೆಯರೊಂದಿಗೆ ಯೋಗಿತಾ ಅವರು ರೂಮ್‌ನಲ್ಲಿ ವಾಸವಾಗಿದ್ದು, ಉಳಿದ ಮೂವರು ರಾತ್ರಿ ಪಾಳಿಯ ಕೆಲಸಕ್ಕೆ ತೆರಳಿ ಬೆಳಿಗ್ಗೆ ಮರಳಿದಾಗ ಯೋಗಿತಾ ಅವರು ರೂಮ್‌ನಲ್ಲಿ ನೆಲದ ಮೇಲೆ ಮಲಗಿದ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಪಕ್ಕದಲ್ಲೇ ತುಂಡಾದ ಸಿಮೆಂಟ್‌ ಕಲ್ಲುಗಳು ಇತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಗಾಯವಾಗಿ ಯೋಗಿತಾ ಮಾತನಾಡುತ್ತಿರಲಿಲ್ಲ. ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಸರ ಕಾಣೆಯಾಗಿತ್ತು. ಕೂಡಲೇ ಆಟೊರಿಕ್ಷಾದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *