Breaking News

ಗಾಂಜಾ ಮಾರಾಟ ಯತ್ನ: ಓರ್ವನ ಬಂಧನ

ಮಂಗಳೂರು: ಮೇರಿಹಿಲ್ ಹೆಲಿಪ್ಯಾಡ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಂತು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಯುವಕನನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ನಿವಾಸಿ ಹಿಲರಿಯ ನಗರ ನಿವಾಸಿ ಇರ್ಷಾದ್ ಅಲಿಯಾಸ್ ಇರ್ಷಾ (26) ಬಂಧಿತ ಆರೋಪಿ. ಕಾವೂರು ಠಾಣೆ ಪೊಲೀಸರು ಬುಧವಾರ ಮಧ್ಯಾಹ್ನ ಬಳಿಕ ಗಸ್ತು ಸಂಚಾರದಲ್ಲಿರುವಾಗ ಹೆಲಿಪ್ಯಾಡ್ ನ ಬಳಿ ಮೇರಿಹಿಲ್ ಜಂಕ್ಷನ್ ಕಡೆಗೆ ಹೊಗುವ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಯುವಕನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಸ್ಕೂಟರ್ ಡಿಕ್ಕಿಯನ್ನು ಪರಿಶೀಲಿಸಿದಾಗ, 75 ಸಾವಿರ ರೂ. ಮೌಲ್ಯದ 3 ಕೆ.ಜಿ 138 ಗ್ರಾಂ ತೂಕದ ಗಾಂಜಾ ಪತ್ತೆಯಾಗಿದೆ. ಆರೋಪಿಯಿಂದ 70 ಸಾವಿರ ರೂ. ಮೌಲ್ಯದ ಸ್ಕೂಟರ್ ಮತ್ತು 8 ಸಾವಿರ ರೂ. ಮೌಲ್ಯದ ಮೊಬೈಲ್, 1 ಸಾವಿರ ರೂ. ಮೌಲ್ಯದ ಡಿಜಿಟಲ್ ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಕಾವೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *