ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿ ಭಾಗದಲ್ಲಿ ಭಾರಿ ಪ್ರಮಾಣದ ಬುಲೆಟ್‌ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಎಸ್‌ಎಲ್‌ಆರ್ ಹಾಗೂ ಮಿಷನ್ ಗನ್‌ಗಳಿಗೆ ಬಳಸುವ ಒಟ್ಟು 214 ಬುಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಬಂಗಾರಪೇಟೆ ತಾಲೂಕಿನ ದಾಸರಮಲ್ಲ ಬ್ರಿಡ್ಜ್ ಬಳಿ ಅಪರಿಚಿತರು ಈ ಬುಲೆಟ್‌ಗಳನ್ನು ಬಿಸಾಡಿ ಹೋಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕಾಮಸಮುದ್ರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ 135 ಜೀವಂತ ಗುಂಡುಗಳು ಮತ್ತು 85 ಖಾಲಿ ಕಾರ್ಟ್ರಿಡ್ಜ್‌ಗಳು ಪತ್ತೆಯಾಗಿವೆ. ಪತ್ತೆಯಾದ ಗುಂಡುಗಳು 1969ರಲ್ಲಿ ಮಹಾರಾಷ್ಟ್ರದಲ್ಲಿ ತಯಾರಾದವುಗಳಾಗಿದ್ದು, 7.6 mm ಮಾದರಿಯವು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇವು ಮಿಸ್‌ಫೈರ್ ಅಥವಾ ಡಮ್ಮಿ ಬುಲೆಟ್‌ಗಳಾಗಿರಬಹುದೆಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಹಲವು ತಿಂಗಳ ಹಿಂದೆಯೇ ಇವುಗಳನ್ನು ಇಲ್ಲಿ ಬಿಸಾಡಿರಬಹುದೆಂದು ಅಂದಾಜಿಸಲಾಗಿದ್ದು, ಗಡಿ ಪ್ರದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದ ಮದ್ದುಗುಂಡುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಮಸಮುದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬುಲೆಟ್‌ಗಳನ್ನು ಯಾರು ತಂದರು ಮತ್ತು ಇದರ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

