Breaking News

ಬೆಂಕಿ ತಗುಲಿ ನಾಲ್ಕು ಬೈಕ್ ಭಸ್ಮ

ಮುಳಬಾಗಿಲು: ನಗರದ ನೇತಾಜಿ ಕ್ರೀಡಾಂಗಣದ ಬಳಿ ಸಾಲಾಗಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಗುರುವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿದ್ದು, ಮೂರ್ನಾಲ್ಕು ವಾಹನಗಳಿಗೆ ಬೆಂಕಿಯ ಶಾಖ ತಗುಲಿದೆ. ಮುಳಬಾಗಿಲು ನಗರದಿಂದ ಬೇರೆಡೆಗೆ ನಾನಾ ಕೆಲಸ ಕಾರ್ಯಗಳಿಗೆ ಹೋಗುವ ದ್ವಿಚಕ್ರ ವಾಹನ ಸವಾರರು ಕ್ರೀಡಾಂಗಣದ ಒಂದು ಭಾಗದಲ್ಲಿ ನಿಲ್ಲಿಸುತ್ತಿದ್ದರು. ಅದೇ ರೀತಿ ಗುರುವಾರವೂ ಸುಮಾರು 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದರು. ಆದರೆ ಆಕಸ್ಮಿಕ ಬೆಂಕಿಗೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ನಾಲ್ಕು ವಾಹನಗಳು ಸುಟ್ಟು ಕರಕಲಾಗಿದ್ದವು. ಉಳಿದ ವಾಹನಗಳನ್ನು ಬೆಂಕಿಯಿಂದ ರಕ್ಷಿಸಿದ್ದಾರೆ. ನಗರ ಠಾಣೆ ಇನ್‌ಸ್ಪೆಕ್ಟರ್ ಸುಧಾಕರ್ ರೆಡ್ಡಿ, ಅಣ್ಣಯ್ಯ, ಎಲ್.ಶಿವರಾಜ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *