Breaking News

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ತಂದೆ ಮತ್ತು ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ 2 ವರ್ಷ ನಿರಂತರ ಅತ್ಯಾಚಾರ

ರಾಯಚೂರು: ಕರುಳ ಕುಡಿಯನ್ನು ರಕ್ಷಿಸಬೇಕಾದ ತಂದೆಯೇ ಕಾಮಪಿಶಾಚಿಯಾದ ಘೋರ ಘಟನೆಯೊಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರು ಪೊಲೀಸರ ಅತಿಥಿಯಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *