ಚಿಕ್ಕಬಳ್ಳಾಪುರ: ಬ್ಯಾಂಕಾಕ್ನಿಂದ ಅಕ್ರಮವಾಗಿ ವನ್ಯಜೀವಿಗಳನ್ನು ಸಾಗಿಸುತ್ತಿದ್ದ 47ವನ್ಯ ಜೀವಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪು ಪಾದದ ಆಮೆಗಳು, ಆಫ್ರಿಕನ್ ಆಮೆಗಳು, ಅರ್ಜೆಂಟಿನಾ ಕಪ್ಪು-ಬಿಳಿ ತೇಗು, ಗೋಲ್ಡೀಸ್ ಮಾರ್ಮೋಸೆಟ್ ಸೇರಿದಂತೆ 47 ವನ್ಯ ಜೀವಿಗಳನ್ನ ವಶಕ್ಕೆ ಪಡೆಯಲಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮುಂದಿನ ಕಾನೂನು ಕ್ರಮಕ್ಕಾಗಿ ಬೆಂಗಳೂರು ಗ್ರಾಮಾಂತರ ಆರ್ಎಫ್ಇ ವಶಕ್ಕೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

