Breaking News

ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಆರೋಪಿ ಭರತ್‌ ಜಯರಾಮ್‌ ದಾಸ ಜಿಲ್ಲೆಯಿಂದ ಗಡಿಪಾರು

ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ನಿವಾಸಿ ಭರತ್‌ ಜಯರಾಮ್‌ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.ಆರೋಪಿ ಭರತ್ ವಿರುದ್ಧ ಈಗಾಗಲೇ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 14ರಂದು ಎಸ್‌ಪಿ ಅವರು ಈ ಆದೇಶ ಜಾರಿಗೊಳಿಸಿದ್ದಾರೆ. ಗಡಿಪಾರಾದ ಆರೋಪಿಯನ್ನು ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *