Breaking News

ರಾಮನಗರದಲ್ಲಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಇಬ್ಬರು ಆರೋಪಿಗಳು ಬಂಧನ

ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಆನ್‌ಲೈನ್‌ಗೆ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಇಬ್ಬರನ್ನು ರಾಮನಗರ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಗ್ಗಲಿಪುರದ ಕಿರಣ್ ಕುಮಾರ್ ಮತ್ತು ಆದಿತ್ಯ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ಅವರ ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಾಷ್ಟ್ರೀಯ ಮಟ್ಟದ ಸೈಬರ್ ಪೋರ್ಟಲ್ ಮೂಲಕ ಬಂದ ಸುಳಿವಿನ ಆಧಾರದ ಮೇಲೆ ಸಿಐಡಿ ಮತ್ತು ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಅಪ್ರಾಪ್ತರ ಸುರಕ್ಷತೆ ಸಂಬಂಧಿಸಿದಂತೆ ಗಂಭೀರ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *