ಹಾಸನ ಜಿಲ್ಲೆಯ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನ ಟೈರ್ ಸ್ಫೋಟಗೊಂಡು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 36 ಪ್ರಯಾಣಿಕರು ಇದ್ದರು. ಟೈರ್ ಸ್ಫೋಟವಾದ ತಕ್ಷಣ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ಆದರೆ ಸಮಯಪ್ರಜ್ಞೆ ತೋರಿದ ಚಾಲಕ ತಕ್ಷಣ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಹಲವರ ಮೊಬೈಲ್, ನಗದು ಹಾಗೂ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಈ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

