ಬೆಂಗಳೂರು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಬಕಾರಿ ಇಲಾಖೆ ನಡೆಸಿದ ತಪಾಸಣೆ ವೇಳೆ 13.41 ಕೆಜಿ ಗಾಂಜಾ ಪತ್ತೆಯಾಗಿದೆ. ಫ್ಲಾಟ್‌ಫಾರ್ಮ್‌ನಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಚೀಲವನ್ನು ಪರಿಶೀಲಿಸಿದಾಗ ಗಾಂಜಾ ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಯುತ್ತಿರುವುದನ್ನು ಗಮನಿಸಿದ ಸಾಗಾಟಗಾರರು ಚೀಲ ಬಿಟ್ಟು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಗಾಂಜಾ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ರೈಲ್ವೆ ಪೊಲೀಸರು ಹಾಗೂ ಅಬಕಾರಿ ಇಲಾಖೆ ಜಂಟಿಯಾಗಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

