Breaking News

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

ಕೊಪ್ಪಳ: ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 6 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.   ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಸ್ಥಳದಲ್ಲೇ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಎನ್ನುವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ. ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದ್ದು, ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *