Breaking News

ಕದ್ದ ಬೈಕ್‌ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಬೆಂಗಳೂರು: ಕದ್ದ ಬೈಕ್‌ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಶ್ರೀರಾಂಪುರ ಠಾಣೆ ಪೊಲೀಸರು 10 ದ್ವಿಚಕ್ರವಾಹನ ಜಪ್ತಿ ಮಾಡಿದ್ದಾರೆ. ತಮಿಳುನಾಡು ಮೂಲದ ಸಂಗಂ ಮುತ್ತು ಹಾಗೂ ರಂಜಿತ್‌ ಕುಮಾರ್‌ಬಂಧಿತರು. ಆರೋ ಪಿಗಳಿಂದ 10 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಬ್ಬರೂ, ನಗರದ ವಿವಿಧೆಡೆ ಸುತ್ತಾಡಿ ದ್ವಿಚಕ್ರವಾಹನಗಳ ಹ್ಯಾಂಡ್‌ ಲಾಕ್‌ ಮುರಿದು ಕದಿಯುತ್ತಿದ್ದರು. ನಂತರ ಕದ್ದ ದ್ವಿಚಕ್ರವಾಹನಗಳನ್ನು ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದರು. ಇನ್ನು ಈ ದ್ವಿಚಕ್ರವಾಹನಗಳ ಮಾರಾಟ ಮಾಡಲು ಗ್ರಾಹಕರನ್ನು ಹುಡುಕುತ್ತಿದ್ದರು. ಈ ನಡುವೆ ಶ್ರೀರಾಂಮಪುದ ರಘು ಎಂಬುವವರು ಕೆಲವು ದಿನಗಳ ಹಿಂದೆ ತಮ್ಮ ದ್ವಿಚಕ್ರ ವಾಹನವನ್ನು ಮನೆ ಮುಂದೆ ನಿಲ್ಲಿಸಿದ್ದರು. ಬೆಳಗಾಗುವಷ್ಟರಲ್ಲಿ ದ್ವಿಚಕ್ರವಾಹನವನ್ನು ಆರೋಪಿಗಳು ಕಳ್ಳತನ ಮಾಡಿದ್ದರು. ಈ ಬಗ್ಗೆ ರಘು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಶ್ರೀರಾಂಪುರ ಠಾಣೆ ಪೊಲೀಸರು ಕೃತ್ಯ ನಡೆದ ಸ್ಥಳದ ಆಸು-ಪಾಸಿನಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೋಪಿಗಳ ಸುಳಿವು ಪತ್ತೆಯಾಗಿದೆ. ಇದರ ಆಧಾರದ ಮೇಲೆ 10 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *