Breaking News

ಕಡಬದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಬಂಧನ

ಕಡಬ: ನೆರೆಮನೆಯ ಮನೆಗೆ ಟಿವಿ ನೋಡಲು ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಡಬ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಲಂಕಾರು ಗ್ರಾಮದ ಜಗದೀಶ ಕುಂಬಾರ @ ಜಗ್ಗ (43) ಎಂದು ಗುರುತಿಸಲಾಗಿದೆ. 14 ವರ್ಷದ ಬಾಲಕಿ ನೆರೆಹೊರೆಯ ಮನೆಗೆ ಟಿವಿ ವೀಕ್ಷಣೆಗೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ, ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಧ್ಯಾಹ್ನ ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ತಾಯಿ, ಮಗಳು ಅಳುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 53/2026ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ 2012ರ ಕಲಂ 8 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 351(3) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *