ಹುಬ್ಬಳ್ಳಿ: ಕಾನೂನು ಬಾಹಿರವಾಗಿ ಭಾರತ ಪ್ರವೇಶಿಸಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವೇಳೆ ನಡೆಸಿದ ತಪಾಸಣೆಯಲ್ಲಿ ಇವರು ಸಿಕ್ಕಿಬಿದ್ದಿದ್ದಾರೆ. ಬಂಧಿತರು ಯಾವುದೇ ಮಾನ್ಯ ಗುರುತಿನ ದಾಖಲೆಗಳನ್ನು ಹೊಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಖಲೆಗಳಿಲ್ಲದೇ ರೈಲಿನಲ್ಲಿ ಪ್ರಯಾಣಿಸಿ ಹುಬ್ಬಳ್ಳಿವರೆಗೆ ಬಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಇವರು ಯಾವ ಮಾರ್ಗವಾಗಿ ದೇಶ ಪ್ರವೇಶಿಸಿದರು? ರಾಜ್ಯಕ್ಕೆ ಬರುವ ಉದ್ದೇಶವೇನು? ಇವರ ಹಿಂದೆ ಯಾವುದೇ ಜಾಲವಿದೆಯೇ? ಎಂಬ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

