Breaking News

ಚಾಕು ತೋರಿಸಿ ಅರಣ್ಯಕ್ಕೆ ಕರೆದೊಯ್ದು ದರೋಡೆ

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಚಿನ್ನಾಭರಣ ದೋಚಿ, ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರದ ವಿವೇಕ್‌ (22) ಮತ್ತು ನಿಖೀಲ್‌ (19) ಬಂಧಿತರು. 6 ಲಕ್ಷ ರೂ. ಮೌಲ್ಯದ 47 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಿ ಚನ್ನಸಂದ್ರ ನಿವಾಸಿ ಅಶೋಕ್‌ ಎಂಬುವವರು ಕೆಲಸದ ನಿಮಿತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ಕೆ.ಆರ್‌.ಪುರ ಪೆಟ್ರೋಲ್‌ ಬಂಕ್‌ ಬಳಿ ಹೋಗುತ್ತಿದ್ದಾಗ, ಆರೋಪಿಗಳ ಪೈಕಿ ಓರ್ವ ವಿಳಾಸ ಕೇಳುವ ನೆಪದಲ್ಲಿ ಅಡ್ಡಬಂದು ವಾಹನ ನಿಲ್ಲಿಸಿದ್ದ. ನಂತರ ಅಶೋಕ್‌ ಅವರ ಬೈಕ್‌ನ ಕೀ ಕಿತ್ತುಕೊಂಡಿದ್ದ. ಅದೇ ಸಮಯಕ್ಕೆ ಈತನ ಮತ್ತೂಬ್ಬ ಆರೋಪಿ ಬಂದು ಅಶೋಕ್‌ ಅವರ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಚಾಕುವಿನಿಂದ ಬೆದರಿಸಿ ಬೈಕ್‌ನಲ್ಲಿ ಕೂರಿಸಿಕೊಂಡು ಚನ್ನಸಂದ್ರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಚಿನ್ನಾಭರಣ, ಮೊಬೈಲ್‌ ದೋಚಿ ಪರಾರಿಯಾಗಿದ್ದರು. ಇತ್ತ ಅಶೋಕ್‌ ಕೆ.ಆರ್‌.ಪುರ ಠಾಣೆ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ಪೊಲೀಸರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *