ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಆರು ವರ್ಷಗಳಿಂದ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನ್ನು ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮುಲ್ಕಿಯ ಅಭಿಜಿತ್(34) ಬಂಧಿತ ಆರೋಪಿ. ಈತ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಕಾರ್ಕಳ ಡಿವೈಎಸ್ಪಿ ಮತ್ತು ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣಾ ಉಪನಿರೀಕ್ಷಕರಾದ ತೇಜಸ್ವಿ ಮತ್ತು ಶುಭಕರ ನೇತೃತ್ವದಲ್ಲಿ ಸಿಬ್ಬಂದಿ ಮೊಹಮ್ಮದ್ ರಫೀಕ್, ರಾಘು ಅವರು ಮೇ 15ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈತನ ವಿರುದ್ಧ ಮೈಸೂರು ನರಸಿಂಹರಾಜಪುರ ಮತ್ತು ಬಜ್ಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನನ್ನು ಮೇ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

