ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ, ಕಾವೂರು, ಪಣಂಬೂರು ಹಾಗೂ ಪಾಂಡೇಶ್ವರ ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಪ್ಪಿನಮೊಗರು ಕಡೇಕಾರ್ ನೇತ್ರಾವತಿ ಸೇತುವೆ ಕೆಳಭಾಗದಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆಯ ವ್ಯಕ್ತಿಯೊಬ್ಬನನ್ನು ಕಾವೂರು ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಇನ್ನೂ ಪಣಂಬೂರು ಗ್ರಾಮದ ಕುದುರೆಮುಖ ಜಂಕ್ಷನ್ ಬಳಿ ನಶೆಯಲ್ಲಿದ್ದ ವ್ಯಕ್ತಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ನಗರದ ಎಮ್ಮೆಕೆರೆ ಮೈದಾನ ಹಾಗೂ ಮೋರ್ಗನ್ಸ್‌ಗೇಟ್ ಪ್ರದೇಶಗಳಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

