ಬೆಂಗಳೂರು ರಸ್ತೆಯ ಕುರಿಗೌಡನದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಗುದ್ದಿ, ಪಕ್ಕದ ರಸ್ತೆಯ ಎದುರುಗಡೆಯಿಂದ ಬರುತ್ತಿದ್ದ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ದೀಕ್ಷಾ ಕಾಲೇಜಿನ ಶಾಲಾ ವಾಹನ ಕನಕಪುರದಿಂದ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬ್ಬಂದಿಗಳನ್ನು ಕರೆದುಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕನಕಪುರದ ಕಾರು ಬೆಂಗಳೂರಿನಲ್ಲಿ ಹೂವುಗಳನ್ನು ಖರೀದಿಸಿ ವಾಪಸ್ ಕನಕಪುರಕ್ಕೆ ಬರುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದಿದೆ. ಎರಡು ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನದಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಕಪುರ ಪೊಲೀಸರು ಪ್ರಕರಣ ದಾಖಲಿಸಿ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

