ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಜ್ಯುವೆಲರಿ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದೆ. ಸಿನಿಮೀಯ ರೀತಿಯಲ್ಲಿ ಕೇವಲ 45 ನಿಮಿಷಗಳಲ್ಲಿ ಖದೀಮರ ಗ್ಯಾಂಗ್ ಸುಮಾರು 70 ರಿಂದ 80 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಅಣ್ಣಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಶಾರದಾ ಜ್ಯುವೆಲರಿ ಶಾಪ್ನಲ್ಲಿ ಈ ಕೃತ್ಯ ನಡೆದಿದೆ. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಕಳ್ಳರು, ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ 7 ಕ್ವಿಂಟಲ್ ತೂಕದ ತಿಜೋರಿ ಸಮೇತ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಹಿಂದೆ ಎರಡು ಭಾರಿ ಕೂಡ ಶಾರದಾ ಜ್ಯುವೆಲರಿ ಶಾಪ್ನಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

