ಬೆಂಗಳೂರು: ಯಶವಂತಪುರದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಪ್ಪಳ ಮೂಲದ ಶರಣಪ್ಪ(36) ಮೃತ ವ್ಯಕ್ತಿ. ಬಾರ್‌ನಲ್ಲಿ ಮಾತಿನ ಚಕಮಕಿ ನಡೆದ ವೇಳೆ ಆನಂದ್ ಮತ್ತು ದಕ್ಷಿಣಾಮೂರ್ತಿ ಸೇರಿ ಶರಣಪ್ಪನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗಳಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಆರ್.ಎಂ.ಸಿ ಯಾರ್ಡ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

